ಅಮರಾವತಿ:ಆಂಧ್ರಪ್ರದೇಶ ಕರಾವಳಿ ಪ್ರದೇಶಕ್ಕೆ ಬುಧವಾರ ಬೆಳಗಿನ ಜಾವ ಅರ್ನಬ್ ಚಂಡಮಾರುತ ಅಪ್ಪಳಿಸಿದೆಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.ಆಂಧ್ರಪ್ರದೇಶದ ದಕ್ಷಿಣ ಭಾಗದ ರಾಜ್ಯದ ಹಲವು ಜಿಲ್ಲೆಗಳಲ್ಲಿ
ಭಾರಿ ಮಳೆಯಾಗುತ್ತಿದೆ.ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಬುಧವಾರ ಬೆಳಿಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಚಂಡಮಾರುತವು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಆಂಧ್ರಪ್ರದೇಶ ಕರಾವಳಿಯ ಮೂಲಕ ಹಾದು ಹೋಗುತ್ತಿದೆ. ಈ ಚಂಡಮಾರುತವು ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ಗರಿಷ್ಠ 135 ಕಿ.ಮೀ.ನಿಂದ 150 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಅತಿ ತೀವ್ರ ಸ್ವರೂಪದ ಚಂಡಮಾರುತವಾಗಿ ಕರಾವಳಿಯನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪ್ರಭಾವದಿಂದ ಅನಕಪಲ್ಲಿ, ವಿಶಾಖಪಟ್ಟಣ, ಕಾಕಿನಾಡ ಮತ್ತು ಕೋನಸೀಮಾ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುತ್ತಿದೆ. ಚಂಡಮಾರುತದ ಅಬ್ಬರಕ್ಕೆ ಹಲವೆಡೆ ಮರಗಳು ಧರೆಗುರುಳಿವೆ.
ಚಂಡಮಾರುತವನ್ನು ಎದುರಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಒಡಿಶಾ ಹಾಗೂ ತಮಿಳುನಾಡಿನಲ್ಲೂ ಮಳೆಯಾಗುತ್ತಿದೆ.











