ಸುಳ್ಯ:ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗ ಇದರ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಸುಳ್ಯದ ಸಾಂದೀಪ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು.ಶಾಲಾ ಮಕ್ಕಳಿಗೆ ಸಂಘದ ವತಿಯಿಂದ ಮಕ್ಕಳೊಂದಿಗೆ ವಿಶೇಷ ಭೋಜನ ಕೂಟವನ್ನು ಏರ್ಪಡಿಸಲಾಗಿದ್ದು
ಮಕ್ಕಳಿಗೆ ಮಧ್ಯಾಹ್ನದ ಊಟ ಹಣ್ಣು ಹಂಪಲು ವಿತರಣೆ ಹಾಗೂ ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು. ಸುಬ್ರಮಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಪೈ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದಾರು.
ಸಭಾಧ್ಯಕ್ಷತೆಯನ್ನು ಸಾಂದೀಪ ಶಾಲೆಯ ಅಧ್ಯಕ್ಷ ಎಂಬಿ ಸದಾಶಿವ ರವರು ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿಭಾಗದ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಶಾಲಾ ಮುಖ್ಯ ಶಿಕ್ಷಕಿ ಹರಿಣಿ ಸದಾಶಿವ, ಶಾಲಾ ಸಲಹಾ ಸಮಿತಿ ಸದಸ್ಯರಾದ ನೇತ್ರಾವತಿ ಪಡ್ಡಂಬೈಲು, ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಕೋಶಾಧಿಕಾರಿ ಪುಷ್ಪ ರಾಧಾಕೃಷ್ಣ, ಟ್ರಸ್ಟಿ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಇದ್ದರು.ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸುಳ್ಯ ವಲಯದ ಎಲ್ಲಾ ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.












