ಸುಳ್ಯ: ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಶಾಲಾ ಆರೋಗ್ಯ ಕೇಂದ್ರದ ವತಿಯಿಂದ ‘ಮುಟ್ಟು ಗುಟ್ಟಲ್ಲ’
ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಪೋಷಕರ ಸಭೆಯಲ್ಲಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಸುಳ್ಯದ ಖ್ಯಾತ ಸ್ತ್ರೀ ಆರೋಗ್ಯ ತಜ್ಞೆ ಡಾ. ವೀಣಾ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮ ಸಂಯೋಜಕರಾದ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಲಜಾಕ್ಷಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಸದಸ್ಯರಾದ ಧೀರಾ ಕ್ರಾಸ್ತಾ ಹಾಗೂ ಶಿಕ್ಷಣ ಸಂಯೋಜಕರಾದ ನಳಿನಿ ಕೆ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಉಪಪ್ರಾಂಶಪಾಲರಾದ ಪ್ರಕಾಶ ಮೂಡಿತ್ತಾಯ, ಹಿರಿಯ ಶಿಕ್ಷಕರಾದ ಸುಂದರ ಕೇನಾಜೆ, ಎಸ್.ಡಿ.ಎಂ.ಸಿ. ಸದಸ್ಯರಾದ ಪುಟ್ಟಣ್ಣ, ಲತಾ ರೈ, ಕವಿತಾ, ರೇಖಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕರಾದ ಶಿಕ್ಷಕಿ ಮಮತಾ ಯಂ.ಜೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಚಂದ್ರಶೇಖರ ಕೆ.ಎಸ್. ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು.