ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗಿನ ಜಾವದವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು
ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಮಹಾರಾಷ್ಟ್ರದಿಂದ ಉತ್ತರ ಕೇರಳ ಕರಾವಳಿಯವರೆಗೆ ಸಮುದ್ರದಲ್ಲಿ ಸುಳಿ ಉಂಟಾಗಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.