ಪುತ್ತೂರು:ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಸಂಘಟನೆ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರುನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೂಗುಚ್ಛ ನೀಡಿ ಅರುಣ್ ಕುಮಾರ್ ಪುತ್ತಿಲ ಅವರನ್ನು
ಬಿಜೆಪಿಗೆ ಸ್ವಾಗತಿಸಿದರು.ಮಾಜಿ ಸಚಿವ ವಿ.ಸುನಿಲ್ ಕುಮಾರ್
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಅವರು ಪುತ್ತಿಲ ಅವರನ್ನು ಪಕ್ಷದ ಕಚೇರಿಗೆ ಕರೆದೊಯ್ದರು.
ಬೆಂಗಳೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತುಕತೆ ಬಳಿಕ ಬಿಜೆಪಿಗೆ ಸೇರ್ಪಡೆಯಾದರು.









