ಬೆಂಗಳೂರು:ಲೋಕ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚು ಮತಗಳಿಂದ ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ಬಿಜೆಪಿ ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ಜೊತೆಗೆ ಮಾತುಕತೆ ನಡೆಸಿ ಬಿಜೆಪಿ ಸೇರ್ಪಡೆ ಬಳಿಕ
ಮಾಧ್ಯಮಗಳ ಜೊತೆ ಮಾತನಾಡಿದ ಅರುಣ್ ಪುತ್ತಿಲ, ಈ ರಾಷ್ಟ್ರದ ಗೌರವವನ್ನು ಎತ್ತರಕ್ಕೆ ಏರಿಸಿದ ಪ್ರಧಾನಿ ಮೋದಿ ಅವರ ಕೆಲಸ ಕಾರ್ಯಗಳಿಗೆ ಶಕ್ತಿ ತುಂಬ ಬೇಕೆಂಬ ಯೋಚನೆಯಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗು ಹಲವು ಮುಖಂಡರ ಜೊತೆಗೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. ಮೋದಿ ಪರಿವಾರದ ಜತೆ ಪುತ್ತಿಲ ಪರಿವಾರ ಕೆಲಸ ಮಾಡಲಿದೆ. ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸಲಿದ್ದೇವೆ. ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿಯನ್ನು ದೊಡ್ಡ ಅಂತರದಿಂದ ಗೆಲ್ಲಿಸುವಲ್ಲಿ ನಾವು ಶ್ರಮ ವಹಿಸುತ್ತೇವೆ ಎಂದು ಹೇಳಿದರು.