ಸುಳ್ಯ:ಸುಳ್ಯದ 110 ಕೆ ವಿ ಮತ್ತು ಅಂಬೆಡ್ಕರ್ ಭವನ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದಿರುವ ಕುರಿತು ಯಾರೂ ಇದುವರೆಗೂ ತನ್ನ ಗಮನಕ್ಕೆ ಬಂದಿಲ್ಲ. ಇದೀಗ ಪತ್ರಕರ್ತರು ಪ್ರಶ್ನಿಸಿದಾಗಲೇ ನನ್ನ ಗಮನಕ್ಕೆ ಬಂದಿರುವುದು.ಇದರ ಪರಿಹಾರಕ್ಕೆ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರವಾಗಿ ವೀಕ್ಷಕರಾಗಿ
ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು
ರಾಜ್ಯ ಸರಕಾರ ಇಲ್ಲಿಯ ತನಕ ಯಾವ ಶಾಸಕರಿಗೂ ಅನುದಾನದಲ್ಲಿ ತಾರತಮ್ಯ ಮಾಡಿಲ್ಲ ಮಾಡುವುದು ಇಲ್ಲಾ ಅನುದಾನ ತರಿಸಲು ಪ್ರಯತ್ನ ನಡೆಸಬೇಕು ಅಷ್ಟೇ ಎಂದು ಹೇಳಿದರು.ಎರಡು ತಿಂಗಳುಗಳಲ್ಲಿ ಪೂರ್ಣ ಪ್ರಮಾಣದ ಡಿಪಿಆರ್ ಆಗಲಿದೆ ಎಂದು ಹೇಳಿದರು.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂತ ಹೆಚ್ಚಿನ ಕಾಲದಿಂದ ಬಿಜೆಪಿ ಆಡಳಿತವನ್ನು ನಡೆಸುತ್ತಾ ಬರುತ್ತಿದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ ಎಂದು ಅವರು ದೂರಿದರು.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಡಿಪಿಆರ್ ಮಾಡಲು ಕೇಂದ್ರ ಸರಕಾರದ ಅನುದಾನ ತಡವಾಗುವು ಹಿನ್ನಲೆಯಲ್ಲಿ ರಾಜ್ಯದಿಂದ 3 ಕೋಟಿ 19 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು ಪ್ರಾಥಮಿಕ ಡಿಪಿಆರ್ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಇಲ್ಲಿ ಯಾವುದೇ ಭಿನ್ನಮತವಿಲ್ಲ ಕೆಲವು ಸಂದರ್ಭದಲ್ಲಿ ಅಧ್ಯಕ್ಷರುಗಳ ಆಯ್ಕೆಯಾಗುವಾಗ ಸಣ್ಣಪುಟ್ಟ ಗೊಂದಲಗಳು ಉಂಟಾಗುವುದು ಸಹಜ. ಅದನ್ನು ಪಕ್ಷ ಸರಿ ಮಾಡುತ್ತದೆ.
ಸುಳ್ಯದಲ್ಲಿರುವ ಕಾರ್ಯಕರ್ತರುಗಳ ಮತ್ತು ಕಾಂಗ್ರೆಸ್ ನಾಯಕರುಗಳ ಉತ್ಸಾಹ ನೋಡಿದಾಗ ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷ 10 ವರ್ಷದ ಮೊದಲೇ ಅಧಿಕಾರಕ್ಕೆ ಬರಬೇಕಾಗಿತ್ತು ಎಂದು ಅನಿಸುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 2006 ಕೋಟಿ ರೂಗಳ ಯೋಜನೆಗಳನ್ನು ತರಲಾಗಿದೆ. ಅದರಲ್ಲಿ ಸುಳ್ಯ ತಾಲೂಕಿನ ಸುಮಾರು 32 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಯೋಜನೆಗಳನ್ನು ತರುವ ಮಾಹಿತಿ ನಮ್ಮಲ್ಲಿ ಇದ್ದಲ್ಲಿ ಅದನ್ನು ತರಲು ಸಾಧ್ಯವಾಗುತ್ತದೆ. ಅದಲ್ಲದೆ ಸುಮ್ಮನೇ ಇದ್ದರೆ ಯಾವುದೇ ಅನುದಾನವು ನಮ್ಮ ಕೈಗೆ ಸಿಗುವುದಿಲ್ಲ ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ಕೆ ಪಿ ಸಿ ಸಿ ಉಪಾಧ್ಯಕ್ಷರಾದ ಎಂ ನಾರಾಯಣ ಸ್ವಾಮಿ, ಡಿ ಸಿ ಸಿ ಅಧ್ಯಕ್ಷ ಹರೀಶ್ ಕುಮಾರ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹಿದ್ ತೆಕ್ಕಿಲ್, ಜಿ ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮತ್ತಿತರರು ಉಪಸ್ಥಿತರಿದ್ದರು.














