ದುಬೈ: ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂಭತ್ತು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಯುಎಇ ಒಡ್ಡಿದ 58 ರನ್ಗಳ ಗೆಲುವಿನ ಗುರಿಯನ್ನು ಭಾರತ ಕೇವಲ 4.3 ಓವರ್ನಲ್ಲೇ ಒಂದು ವಿಕೆಟ್ ನಷ್ಟಕ್ಕೆ ಬೆನ್ನಟ್ಟಿತು. ಆ ಮೂಲಕ
ಏಷ್ಯಾ ಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಟಾಸ್ ಗೆದ್ದ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಟೀಮ್ ಇಂಡಿಯಾದ ಬೌಲರ್ಗಳು, ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಯುಎಇ 13.1 ಓವರ್ಗಳಲ್ಲಿ ಕೇವಲ 57 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.ಈ ಗುರಿ ಬೆನ್ನಟ್ಟಿದ ಭಾರತ 4.3 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 30 ರನ್ (3 ಸಿಕ್ಸರ್, 2 ಬೌಂಡರಿ) ಗಳಿಸಿದರು. ಶುಭಮನ್ ಗಿಲ್ ಔಟಾಗದೆ 20 ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 7 ರನ್ ಗಳಿಸಿದರು.
ಭಾರತದ ಪರ ಕುಲದೀಪ್ ಯಾದವ್ ಹಾಗೂ ಶಿವಂ ದುಬೆ ತಲಾ ಮೂರು ವಿಕೆಟ್ಗಳನ್ನು ಕಬಳಿಸಿದರು. ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ತಲಾ ಒಂದು ವಿಕೆಟನ್ನು ಗಳಿಸಿದರು.ಯುಎಇ ಪರ ಆರಂಭಿಕರಾದ ಅಲಿಶಾನ್ ಶರಾಫು (22) ಹಾಗೂ ನಾಯಕ ಮುಹಮ್ಮದ್ ವಾಸೀಮ್ (19) ಮೊದಲ ವಿಕೆಟ್ಗೆ 3.4 ಓವರ್ಗಳಲ್ಲಿ 26 ರನ್ ಪೇರಿಸಿದರು.ಆದರೆ ಈ ವಿಕೆಟ್ ಪತನದ ಬೆನ್ನಲ್ಲೇ ದಿಢೀರ್ ಪತನವನ್ನು ಕಂಡಿತು. ಅಲ್ಲದೆ 10 ವಿಕೆಟ್ಗಳನ್ನು 31 ರನ್ ಅಂತರದಲ್ಲಿ ಕಳೆದುಕೊಂಡಿತು.
ಆರಂಭಿಕರನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್ ಕೂಡ ಎರಡಂಕಿಯ ಮೊತ್ತವನ್ನು ದಾಟಲಿಲ್ಲ. ಭಾರತದ ಪರ ಕುಲದೀಪ್ ಯಾದವ್ ಒಂದೇ ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿ ಮಿಂಚಿದರು.












