ನವದೆಹಲಿ: ಆ.30ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ 18 ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ.ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕನ್ನಡಿಗ ಕೆ. ಎಲ್.ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ತಿಲಕ್ ವರ್ಮಾಗೆ ಅವಕಾಶ
ನೀಡಲಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ) ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್(ವಿಕೆಟ್ ಕೀಪರ್), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, (ಉಪ ನಾಯಕ) ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.
ಮೀಸಲು ಆಟಗಾರ: ಸಂಜು ಸ್ಯಾಮ್ಸನ್
