ಹ್ಯಾಂಗ್ಚೊ: 2023ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಎರಡು ಬೆಳ್ಳಿ ಪದಕ ಗಿಟ್ಟಿಸಿಕೊಂಡಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್ನಲ್ಲಿ ಮತ್ತು ಪುರುಷರ ರೋವಿಂಗ್ (ಲೈಟ್ವೇಟ್ ಡಬಲ್ ಸ್ಕಲ್ಸ್)ನಲ್ಲಿ ಭಾರತಕ್ಕೆ ಪದಕ ಒಲಿಯಿತು. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023 ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಮೊದಲ ಪದಕವನ್ನು ಗೆದ್ದುಕೊಂಡಿದ್ದಾರೆ. ಮಹಿಳೆಯರ
![](https://thesulliamirror.com/wp-content/uploads/2023/09/IMG_20230924_091327.jpg)
10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿತು. ಅತ್ತ ಚೀನಾ 1896.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿತು. ಭಾರತದ ಅರ್ಜುನ್ ಜತ್ ಲಾಲ್ ಮತ್ತು ಅರವಿಂದ್ ಸಿಂಗ್ ಜೋಡಿಯು ಪುರುಷರ ಲೈಟ್ವೇಟ್ ಡಬಲ್ ಸ್ಕಲ್ಸ್ನ ಫೈನಲ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿತು. 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಪ್ರವೇಶಿಸಿದ ಅರ್ಜುನ್ ಲಾಲ್, ಅರವಿಂದ್ ಸಿಂಗ್ ಅವರೊಂದಿಗೆ ಶ್ಲಾಘನೀಯ ಪ್ರದರ್ಶನವನ್ನು ನೀಡಿದರು. ಇವರು 6.28.18 ಸಮಯಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.