ನವದೆಹಲಿ: ಮಹಾರಾಷ್ಟ್ರದ ಬ್ಯಾಟರ್ ಋತುರಾಜ್ ಗಾಯಕವಾಡ್ ಅವರು ಚೀನಾದ ಹಾಂಗ್ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ನಲ್ಲಿ ಪಾಲ್ಗೊಳ್ಳುವ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಟಿ20 ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಭಾರತ ಪುರುಷರ ಮತ್ತು ಮಹಿಳೆಯರ ತಂಡಗಳನ್ನು
ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ.ಪುರುಷರ ತಂಡದಲ್ಲಿ ಯುವ ಆಟಗಾರರು ಮತ್ತು ಹೊಸಬರಿಗೆ ಅವಕಾಶ ನೀಡಲಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅವರಿಗೆ ಸ್ಥಾನ ದೊರೆತಿದೆ. ಮಹಿಳೆಯರ ತಂಡವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಯುವ ವೇಗಿ ಟೈಟಸ್ ಸಾಧು ಅವರಿಗೆ ಅವಕಾಶ ಲಭಿಸಿದೆ.
ತಂಡಗಳು: ಪುರುಷರು: ಋತುರಾಜ್ ಗಾಯಕವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯಿ, ಆವೇಶ್ ಖಾನ್, ಆರ್ಷದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರನ್ ಸಿಂಗ್
ಮಹಿಳೆಯರು: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅಮನ್ಜೋತ್ ಕೌರ್, ದೇವಿಕಾ ವೈದ್ಯ, ಅಂಜಲಿ ಸರವಣಿ, ಟೈಟಸ್ ಸಾಧು, ರಾಜೇಶ್ವರಿ ಗಾಯಕವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ, ಅನುಷಾ ಬಾರೆಡ್ಡಿ