ಸುಳ್ಯ:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ವಾಲ್ಮೀಕಿ ಆಶ್ರಮಶಾಲೆ ಬಾಳಿಲ ಹಾಗೂ
ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಳಿಲ ಸುಳ್ಯ ತಾಲೂಕು ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ವಾಲ್ಮೀಕಿ ಆಶ್ರಮಶಾಲೆ, ಸುಬ್ರಹ್ಮಣ್ಯ ಇದರ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಸುಳ್ಯ ಪುರಭವನದಲ್ಲಿ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.












