ಸುಳ್ಯ:ಪ್ರಧಾನಿ ನರೇಂದ್ರ ಮೋದಿ ಅವರ ಅಯುಷ್ಮಾನ್ ಯೋಜನೆಯಲ್ಲಿ ರಾಜ್ಯ ಸರಕಾರದ ಸಹಯೋಗದೊಂದಿಗೆ ಆಲೆಟ್ಟಿ ಮತ್ತು ದೇವಚಳ್ಳ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೆಮ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸೆ.13ರಂದು ಶಿಲಾನ್ಯಾಸ ನಡೆಯಲಿದೆ.ಸುಳ್ಯ ತಾಲೂಕಿನ
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಹಾಗೂ ಆಲೆಟ್ಟಿ ಗ್ರಾಮದಲ್ಲಿ ತಲಾ 65 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣ ನಡೆಯಲಿದೆ.ಅಪರಾಹ್ನ 2ಕ್ಕೆ ಕಂದ್ರಪ್ಪಾಡಿ ಹಾಗು ಅ.4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಗ್ರಾಮದ ಪ್ರಮುಖರು ಭಾಗವಹಿಸಲಿದ್ದಾರೆ.ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಆಗಲಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











