ನವದೆಹಲಿ: ಲೋಕಸಭಾ ಚುನಾವಣೆಯ ಜೊತೆಗೇ ನಡೆದ ಒಡಿಶಾ, ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎರಡೂ ಕಡೆ ಎನ್ಡಿಎ ಮೈತ್ರಿಕೂಟ ಮುನ್ನಡೆ ಪಡೆದಿವೆ.
ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು ಅಧಿಕಾರದತ್ತ
ದಾಪುಗಾಲಿಟ್ಟಿದೆ.175 ಕ್ಷೇತ್ರಗಳ ಪೈಕಿ 157ಲ್ಲಿ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಟಿಡಿಪಿ 130, ಜನಸೇವಾ 20, 7 ಕಡೆ ಬಿಜೆಪಿ ಮುನ್ನಡೆ ಪಡೆದಿದೆ. ವೈಎಸ್ಆರ್ಸಿಪಿ ಕೇವಲ 18 ರಲ್ಲಿ ಮಾತ್ರ ಮುನ್ನಡೆ ಪಡೆದಿತ್ತು. ಪುಲಿವೆಂದುಲು ಕ್ಷೇತ್ರದಲ್ಲಿ ಸಿಎಂ ವೈ.ಎಸ್. ಜಗನ್ ಮೋಹನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.
ಒಡಿಶಾದಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ 76 ಮತ್ತು ಬಿಜೆಡಿಯ 56 ಅಭ್ಯರ್ಥಿಗಳು 12 ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದಾರೆ. 147 ವಿಧಾನಸಭಾ ಕ್ಷೇತ್ರಗಳಿವೆ.