ಪಂಜ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ ಇವರ ಆಶ್ರಯದಲ್ಲಿ ‘ಆಟಿ ನೆಂಪು – 2026’ ಕಾರ್ಯಕ್ರಮ ಆ.9 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪಂಜ
ಲಯನ್ಸ್ ಭವನದಲ್ಲಿ ನಡೆಯಿತು.ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ ಅಧ್ಯಕ್ಷತೆ ವಹಿಸಿದ್ದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್,ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು, ಪಂಜ ಲಯನ್ಸ್ ಕ್ಲಬ್ನ
ಆನಂದ ಗೌಡ ಜಳಕದ ಹೊಳೆ, ಜೇಸಿಐ ಪಂಜ ಪಂಚಶ್ರೀ ಮಾಜಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಕಾರ್ಯಕ್ರಮ ನಿರ್ದೇಶಕ ವಿಜೇಶ್ ಹಿರಿಯಡ್ಕ,ಜೇಸಿಐ ಪಂಜ ಪಂಚಶ್ರೀ ಕಾರ್ಯದರ್ಶಿ ಪ್ರಕಾಶ್ ಅಳ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಅಶೋಕ್ ಕುಮಾರ್, ಪ್ರವೀಣ್ ಕುಂಜತ್ತಾಡಿ, ಶಶಿಧರ ಪಳಂಗಾಯ ಮತ್ತಿತರರು ಉಪಸ್ಥಿತರಿದ್ದರು.












