ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ಸಚಿವೆ ಆತಿಶಿ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾಮೀನು ಪಡೆದು
ಹೊರಬಂದ ಬಳಿಕ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಲ್ಲದೆ ದೆಹಲಿ ಜನತೆ ತಮ್ಮನ್ನು ಪ್ರಾಮಾಣಿಕ ಎಂದು ಒಪ್ಪಿಕೊಂಡ ಮೇಲೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಾಗಿ ಪಕ್ಷದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಘೋಷಣೆ ಮಾಡಿದ್ದರು. ಇಂದು ಸಂಜೆ ಕೇಜ್ರಿವಾಲ್ ಅವರು, ಲೆಫ್ಟಿನಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ ಬಹುತೇಕ ಇಲಾಖೆಗಳ ಉಸ್ತುವಾರಿ ಹೊಂದಿದ್ದ ಸಚಿವೆ ಆತಿಶಿ, ಕೇಜ್ರಿವಾಲ್ ಅವರ ನಿಷ್ಠರು ಎಂದೇ ಗುರುತಿಸಲಾಗಿದೆ.