ನವದೆಹಲಿ: ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆತಿಶಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.‘ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು
ಭೇಟಿ ಮಾಡಿ, ಮಾತುಕತೆ ನಡೆಸಲಾಯಿತು. ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಸಂಪೂರ್ಣ ಸಹಕಾರ ದೊರೆಯುತ್ತದೆ ಎಂದು ನಾನು ಭಾವಿಸುತ್ತೇನೆ‘ ಎಂದು ಆತಿಶಿ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿಯಾದ ಬಳಿಕ ಆತಿಶಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.









