ಬೆಂಗಳೂರು:ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 109ನೇ ಜನ್ಮದಿನಾಚರಣೆ ಅಂಗವಾಗಿ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮವು ರಾಜ್ಯ ಬಿ.ಜೆ.ಪಿ ಕಛೇರಿ ಜಗನ್ನಾಥದಲ್ಲಿ ನಡೆಯಿತು, ಕಾರ್ಯಕ್ರಮದ ಉದ್ಘಾಟನೆ ಮತ್ತು, ಅಭಿಯಾನದ ಲಾಂಛನವನ್ನು
ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜೇಯೇಂದ್ರ ಬಿಡುಗಡೆಗೊಳಿಸಲಾಯಿತು. ನಂತರ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಪ್ರತಿಜ್ಞೆ ಮಾಡಿ, ಜಗನ್ನಾಥ ಭವನದ ಎದುರು ಸಸಿ ನೆಡಲಾಯಿತು.ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಭಾಗೀರಥಿ ಮುರುಳ್ಯ, ಡಾ. ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್ ಗೌಡ, ಶರಣು ತಳ್ಳಿಕೇರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಆತ್ಮನಿರ್ಭರ ಭಾರತ ಅಭಿಯಾನದ ಸಹ ಸಂಚಾಲಕರಾದ ಎಸ್.ವಿ.ರಾಘವೇಂದ್ರ ಮತ್ತು ವಿಜಿತ್ ಕಿತ್ತೂರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.





