ಕೋಲ್ಕತ್ತಾ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ದ್ವಿತೀಯ ಸೆಮಿಫೈನಲ್ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ. ಬಲಿಷ್ಠ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಲಿವೆ. ಇಲ್ಲಿ ಗೆದ್ದ ತಂಡ ಫೈನಲ್ನಲ್ಲಿ ಭಾರತ ವಿರುದ್ಧ ಪ್ರಶಸ್ತಿಗೆ ಹೋರಾಡಲಿದೆ.ಆಫ್ರಿಕಾ ತಂಡ ಉತ್ತಮ ಲಯದಲ್ಲಿದ್ದು
ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್ ಬ್ಯಾಟಿಂಗ್ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ, ಜಾನ್ಸೆನ್, ರಬಾಡ, ಸ್ಪಿನ್ನರ್ ಕೇಶವ್ ಮಹಾರಾಜ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಆಸ್ಟ್ರೇಲಿಯಾ ತನ್ನ ಬ್ಯಾಟಿಂಗ್ ವಿಭಾಗದ ಮೇಲೆ ಹೆಚ್ಚು ಅವಲಂಬಿತರಾಗಿದೆ. ಡೇವಿಡ್ ವಾರ್ನರ್ ಮತ್ತು ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್ ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಬೌಲಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ಸೀನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಆ್ಯಡಂ ಝಂಪಾ ಕೋಲ್ಕತ್ತಾದ ನಿಧಾನಗತಿಯ ಮತ್ತು ತಿರುವಿನ ಪಿಚ್ನಲ್ಲಿ ಮ್ಯಾಜಿಕ್ ಮಾಡಲು ಸಿದ್ದರಾಗಿದ್ದಾರೆ. ಒಟ್ಟಿನಲ್ಲಿ ಮತ್ತೊಂದು ಕ್ರಿಕೆಟ್ ರಾದೌತಣಕ್ಕೆ ಕೋಲ್ಕತ್ತಾ ಸಿದ್ಧವಾಗಿದೆ.












