ಲಖನೌ:ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಈ ಬಾರಿಯ ವಿಶ್ವಕಪ್ನಲ್ಲಿ ಗೆಲುವಿನ ಖಾತೆ ತೆರೆದಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ
ಶ್ರೀಲಂಕಾ, 43.3 ಓವರ್ಗಳಲ್ಲಿ 209 ರನ್ ಗಳಿಸಿ ಆಲೌಟ್ ಆಯಿತು. ಲಂಕಾ ಪರ ಕುಶಾಲ ಪೆರೆರಾ 78, ಪಥುಮ್ ನಿಸಾಂಕ 61 ಅರ್ಧಶತಕ ಗಳಿಸಿದರು. 210 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 35.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಆಸೀಸ್ ಪರ ಜೋಶ್ ಇಂಗ್ಲಿಸ್ 58, ಮಿಚೆಲ್ ಮಾರ್ಷ್ 52, ಮಾರ್ನಸ್ ಲಾಬುಶೇನ್ 40, ಗ್ಲೆನ್ ಮ್ಯಾಕ್ಸ್ವೆಲ್ ಔಟಾಗದೆ 31 ಮಾರ್ಕಸ್ ಸ್ಟೊಯಿನಿಸ್ ಔಟಾಗದೆ 20 ರನ್ ಗಳಿಸಿ ತಂಡಕ್ಕೆ ಜಯ ತಂದರು.
ಆಡಿದ 3 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲ ಗೆಲುವು ದಾಖಲಿಸಿದರೆ, ಶ್ರೀಲಂಕಾ ಆಡಿದ ಮೂರು ಪಂದ್ಯದಲ್ಲಿ ಸೋಲನುಭವಿಸಿದೆ.









