ಸಂಪಾಜೆ: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಫಘಾತ ಸಂಭವಿಸಿದ ಘಟನೆ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಫೆ.20ರಂದು ಸಂಜೆ ನಡೆದಿದೆ. ರಿಕ್ಷಾ ಚಾಲಕ ಗಾಯಗೊಂಡಿದ್ದು ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ. ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ರಿಕ್ಷಾ ಪಲ್ಟಿಯಾಗಿದ್ದು ಚಾಲಕ ಸುರೇಶ್ ಎಂಬವರು ಗಾಯಗೊಂಡಿದ್ದಾರೆ. ಸಂಪಾಜೆಯಿಂದ ಕಲ್ಲುಗುಂಡಿಗೆ ಬರುತ್ತಿದ್ದ ಆಟೋ ರಿಕ್ಷಾ ಹಾಗೂ ಮಡಿಕೇರಿಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ . ಅಟೋ ಹಾಗೂ ಕಾರು ಜಖಂಗೊಂಡಿದೆ ಎಂದು ತಿಳಿದು ಬಂದಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









