ಮೂಡಬಿದ್ರೆ:ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಛೇರಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮುಡುಬಿದೆರೆ, ಬ್ಲೊಸಂ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ಇದರ ಜಂಟಿ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟ ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವಯೋಮಾನದ ಬಾಲಕಿಯರ ವಿಭಾಗದ ಅಥ್ಲೆಟಿಕ್ಸ್ ಯೋಗಾಸನ ಸ್ಪರ್ಧೆಯಲ್ಲಿ ಅವನಿ ಎಂ ಎಸ್ ಸುಳ್ಯ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಇವರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ. ಇವರು ಯೋಗಾಭ್ಯಾಸವನ್ನು ಸಂತೋಷ್ ಮುಂಡಕಜೆ ಮತ್ತು ಪ್ರಶ್ವಿಜ ಸಂತೋಷ್ ಮುಂಡಕಜೆ ಸುಳ್ಯ ಇವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.