ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.ಮೃತಪಟ್ಟವರು
ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿ ನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಅಪಘಾತಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ.ಟಿಟಿ ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ.