ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಯನಾಡು-ದೇವರಕೊಲ್ಲಿ ಮಧ್ಯೆ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಕಾರಿನಲ್ಲಿ
ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟವರು ಎಂದು ತಿಳಿದು ಬಂದಿದೆ.ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆ ತರಲಾದರಣು ಮೃತಪಟ್ಟಿದ್ದಾರೆ. ಕೊಡಗು ಗೋಣಿಕೊಪ್ಪ ಮೂಲದ ನಾಲ್ವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನ ಮೋರ್ಚರಿಯಲ್ಲಿ ಇರಿಸಲಾಗಿದೆ.














