ಕಲ್ಲುಗುಂಡಿ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಬಳಿ ಕಾರು ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದೆ.ಸುಳ್ಯ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನ ಹಾಗೂ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮಧ್ಯೆ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂ ಆಗಿದೆ. ಅಪಘಾತದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿ ಬಿದ್ದಿದೆ.ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post