ಸುಳ್ಯ: ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಡಿ.7ರಂದು ಅಪರಾಹ್ನ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಅಸ್ತವ್ಯಸ್ತಗೊಂಡಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post