ಸುಳ್ಯ: ಸುಳ್ಯ ಓಡಬಾಯಿ ಬಳಿ ಕಾರು ಹಾಗೂ ಟ್ರಾವೆಲರ್ ಮಧ್ಯೆ ಉಂಟಾದ ಅಪಘಾತದಲ್ಲಿ ಓರ್ವರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ಸುಳ್ಯ ಭಾಗಕ್ಕೆ ಬರುತ್ತಿದ್ದ ಟ್ರಾವೆಲರ್ ಹಾಗೂ ಸುಳ್ಯ ಭಾಗದಿಂದ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಚೊಕ್ಕಾಡಿಯ ಮುಖೇಶ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post