ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ
ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳುಗಳ ಕೆಲವರ ಸ್ಥಿತಿ ಗಂಭೀರವಾಗಿದೆ.
ಅರಂತೋಡು ಸಮೀಪ ತಿರುವಿನಲ್ಲಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ.