ಸುಳ್ಯ:ತಮಿಳು ಕಾರ್ಮಿಕ ಮುಖಂಡ ಶಿವಕುಮಾರ್ ಕೌಡಿಚ್ಚಾರ್ (50)ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಕೌಡಿಚ್ಚಾರ್ ನಿವಾಸಿಯಾದ
ಶಿವಕುಮಾರ್ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತಮಿಳು ಜನರ ಜಾತಿ ಸರ್ಟಿಫಿಕೇಟ್ಗಾಗಿ ನಡೆಸಿದ ಹೋರಾಟದ ನೇತೃತ್ವ ವಹಿಸಿದ್ದರು.