ಸುಳ್ಯ:ಅರಂಬೂರಿನ ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಶಿಕ್ಷಕ ಪದ್ಮನಾಭ
ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.









