ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂನಡ್ಕ ಸಮೀಪ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ (31) ಎಂದು ಗುರುತಿಸಲಾಗಿದೆ. ಸುಳ್ಯದ ಖಾಸಗೀ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ನವೀನ್ ಸ್ಕೂಟಿಯಲ್ಲಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸಂದರ್ಭ ಇವರ ಸ್ಕೂಟಿ ಮತ್ತು ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿ ನಜ್ಹು ಗುಜ್ಜಾಗಿದ್ದು ಗಂಭೀರ ಗಾಯಗೊಂಡು ನವೀನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ