ಸುಳ್ಯ:ಡಾ.ರೇಣುಕಾಪ್ರಸಾದ್ ಕೆ.ವಿ ಹಾಗು ಡಾ.ಜ್ಯೋತಿ ಆರ್.ಪ್ರಸಾದ್ ಆಡಳಿತದಲ್ಲಿರುವ ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ ಅ.21ರಂದು ನಡೆಯಿತು. ಬೆಳಿಗ್ಗೆ 6 ಗಂಟೆಗೆ ಆಡಳಿತ ಕಚೇರಿಯಲ್ಲಿ ಗಣ ಹೋಮ ನಡೆಯಿತು. ಬಳಿಕ ವಿವಿಧ ವಿದ್ಯಾಸಂಸ್ಥೆಗಳಲ್ಲಿ
ಆಯುಧಪೂಜೆ ನಡೆಯಿತು. ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಡೆಂಟಲ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್ ಕಾಲೇಜು, ಕೆವಿಜಿ ಐಟಿಐ, ಅಮರ ಜ್ಯೋತಿ ಪದವಿಪೂರ್ವ ಕಾಲೇಜು ಸೇರಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ ನಡೆಯಿತು. ಬಳಿಕ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಸಭಾಂಗಣದಲ್ಲಿ ಶಾರದಾ ಪೂಜೆ ಮತ್ತು ಮಹಾಪೂಜೆ ನಡೆಯಿತು.
ಬಳಿಕ ಮಹಾಮಂಗಳಾರತಿಯಾಗಿ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಗಣಹೋಮ, ಆಯುಧ ಪೂಜೆ, ಶಾರದಾ ಪೂಜೆ ಮತ್ತು ಮಹಾಪೂಜೆ ನೆರವೇರಿತು. ಆಯುಧ ಪೂಜೆ ಹಾಗೂ ಶಾರದಾ ಪೂಜೆಯ ಅಂಗವಾಗಿ ಭಜನಾ ಸಂಕೀರ್ತನೆ ನೆರವೇರಿತು.
ಡಾ.ಜ್ಯೋತಿ ಆರ್.ಪ್ರಸಾದ್, ಮೌರ್ಯ ಆರ್.ಪ್ರಸಾದ್, ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಊರುಬೈಲು, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಎಂ.ವೆಂಕಪ್ಪ ಗೌಡ, ಕೆವಿಜಿ ಶಿಕ್ಚಣ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿಗಗಳು ಭಾಗವಹಿಸಿದ್ದರು.