ಮಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆಯುಧಗಳನ್ನು ಠೇವಣಿ ಇರಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗಿತ್ತು.ಮೇ.15ರ ವರೆಗೆ ನೀತಿ ಸಂಹಿತೆ ಜಾರಿಗೊಂಡಿದ್ದ
ಕಾರಣ, ಮೇ.16ರಿಂದ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ, ಅಧಿಕೃತ ಕೋವಿ ಹಾಗು ಮದ್ದುಗುಂಡು ವ್ಯಾಪಾರಸ್ಥರಿಂದ ಠೇವಣಿ ಇರಿಸಿರುವುದರಿಂದ ಆಯುಧ ಪರವಾನಿಗೆದಾರರಿಗೆ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ರವಿಕುಮಾರ್.ಎಂ.ಆರ್ ಅವರು ಆದೇಶ ಹೊರಡಿಸಿದ್ದಾರೆ.