ಸುಳ್ಯ: ಸುಳ್ಯ ಹಳೇಗೇಟಿನ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರಿಪ್ರಸಾದ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರ. ಡಾ.ಸುಸ್ಮಾ ಹರಿಪ್ರಸಾದ್ ಶೆಟ್ಟಿ ಸ್ವಾತಂತ್ರ್ಯ ದಿನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದೇಶದಿಂದ ಆಗಮಿಸಿದ ಅತಿಥಿಗಳು, ದೇಶದ ವಿವಿಧ ಭಾಗಗಳಿಂದ ಬಂದ ಅತಿಥಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು.