ಸುಳ್ಯ:ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಮೆಂಬರ್ ಹಾಗೂ
ರಾಜಶೇಖರಯ್ಯ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲಾರದ ಡಾ. ಸಂಕನಗೌಡ ಪಾಟೀಲ್, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಎ ಒ ಎಲ್ ಇ ಕಾರ್ಯದರ್ಶಿ ಹೇಮನಾಥ ಕೆ ವಿ, ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ ಬಿ ಎಂ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್ ಹಾಗೂ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕೆ ವಿ ಜಿ ಫಾರ್ಮಾ ಮತ್ತು ರಿಸರ್ಚ್ ಸೆಂಟರಿನ ಸಿ ಇ ಒ ಆದ ಡಾ. ಪುರುಷೋತ್ತಮ್ ಕೆ ಜಿ ಇವರು ಕೆ.ವಿ.ಜಿ. ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಹೊಸ ಔಷಧ ಉತ್ಪನ್ನಗಳ ಬಗ್ಗೆ
ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಕಾಲೇಜಿನಲ್ಲಿ 25 ವರ್ಷಕ್ಕಿಂತ ಅಧಿಕ ಸೇವೆ ಸಲ್ಲಿಸಿದ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯಲಕ್ಷ್ಮಿ ಪಿ ಬಿ ಹಾಗೂ ಕಾಲೇಜಿನ ಕಚೇರಿ ಸಿಬ್ಬಂದಿ ಧರ್ಮಪಾಲ ಎಸ್ ಇವರನ್ನು ಸನ್ಮಾನಿಸಲಾಯಿತು.ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್ ಬಿ ಸ್ವಾಗತಿಸಿ, ನೀಲಿಮಾ ಹಾಗು ಬಳಗ ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಶ್ರವಣ್ ಹಾಗು ಬಳಗ ಆಶಯ ಗೀತೆಯನ್ನು ಹಾಡಿ, ವಿದ್ಯಾರ್ಥಿ ಸಂಘದ ನಾಯಕಿಯಾದ ಡಾ. ನೀಲಾ ಎಂ ವಂದಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಚಿಂತನ ಎನ್ ಎಸ್ ಹಾಗು ಅಮೂಲ್ಯ ಸಿ ನಿರೂಪಿಸಿದರು.












