ಸುಳ್ಯ: ಆಯುಷ್ ಮಂತ್ರಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇದರ ನಿರ್ದೇಶನದಂತೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಸ್ವಸ್ಥವೃತ್ತ ವಿಭಾಗದಿಂದ
ಹಮ್ಮಿಕೊಳ್ಳಲಾಯಿತು. ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ ಜಾಥಾವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರು ಚಾಲನೆ ನೀಡಿದರು..ಕೆವಿಜಿ ಆಯುರ್ವೇದ ಕಾಲೇಜಿನಿಂದ ಆರಂಭವಾದ ಜಾಥಾ ವಿವೇಕಾನಂದ ವೃತ್ತ, ಶ್ರೀ ರಾಂಪೇಟೆ ಮೂಲಕ ವಾಗಿ ಸುಳ್ಯದ ಮುಖ್ಯ ರಸ್ತೆಯಲ್ಲಿ ಸಾಗಿ ಕಟ್ಟೆಕಾರ್ ಮೂಲಕ ಚೆನ್ನಕೇಶವ ದೇವಸ್ಥಾನ ರಸ್ತೆಯಲ್ಲಿ ಸಾಗಿ ಕೆವಿಜಿ ಆಯುರ್ವೇದ ಕಾಲೇಜಿನ ವರೆಗೆ ನಡೆಸಲಾಯಿತು. ಈ ಜಾಗೃತಿ ಜಾಥಾದಲ್ಲಿ ಸಂಸ್ಥೆಯ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಡಾ. ಪ್ರಮೋದ್ ಪಿ. ಎ., ಹಾಗೂ ಸಂಸ್ಥೆಯ 95 ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ದರು.