ಸುಳ್ಯ:ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಸಮಾರಂಭವನ್ನು ಉದ್ಘಾಟಿಸಿದರು. ಆಯುರ್ವೇದ ಇಂದು ಜನಪ್ರಿಯವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ ಮತ್ತು
ನವೀನ ವೈದ್ಯಕೀಯ ಪದ್ಧತಿಗಳನ್ನು ಸಮಯೋಚಿತವಾಗಿ ಬಳಸಿಕೊಂಡು ರೋಗಿಗಳ ಕ್ಷೇಮಕ್ಕಾಗಿ ಬಳಸುವ ವಿಪುಲ ಅವಕಾಶಗಳಿವೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.
ಹರ್ಷಿತಾ ಪುರುಷೋತ್ತಮ್, ಕೆ ವಿ ಜಿ ಫಾರ್ಮಸಿ ಮತ್ತು ರಿಸರ್ಚ್ ಸೆಂಟರ್ ನ ಸಿ ಇ ಒ ಡಾ.ಪುರುಷೋತ್ತಮ ಕೆ ಜಿ , ವಿದ್ಯಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ ಎಸ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಡಾ. ಲೀಲಾದರ್ ಡಿ ವಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಅಶ್ವಿನಿ ಭಟ್ ಹಾಗೂ ಚಿತ್ಕಲಾ ಭಾರದ್ವಾಜ್ ಪ್ರಾರ್ಥನೆ ಹಾಡಿದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ. ಹರ್ಷಿತಾ ಪುರುಷೋತ್ತಮ್ ವಂದಿಸಿದರು. ವಿದ್ಯಾರ್ಥಿಗಳಾದ ಲಕ್ಷ್ಮಿ ಸುರೇಶ್ ಮತ್ತು ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.