ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಮಹತ್ವ ಹಾಗೂ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ಆವಿಷ್ಕಾರಗಳ ಕುರಿತು ಸಾರ್ವಜನಿಕರಿಗೆ ಹಾಗೂ ಜನಸಾಮಾನ್ಯರಿಗೆ ಅರಿವು ಮೂಡಿಸಲು ಜಾಥವನ್ನು ಹಮ್ಮಿಕೊಳ್ಳಲಾಯಿತು.ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ
ಪ್ರಾಂಶುಪಾಲರಾದ ಡಾ. ಲೀಲಾದರ್ ಡಿ.ವಿ. ಅವರು ಜಾಥಕ್ಕೆ ಚಾಲನೆ ನೀಡಿದರು.ಜಾಥದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ನೆಹರೂ ಮೆಮೋರಿಯಲ್ ಕಾಲೇಜಿನ ಎಸೋಸಿಯೆಟ್ ಎನ್.ಸಿ.ಸಿ ಯೋಜನಾಧಿಕಾರಿ ಲೆಫ್ಟಿನೆಂಟ್ ಸೀತಾರಾಮ್ ಎಂ. ಡಿ., ನೆಹರು ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಸ್ನಾತಕೋತರ ವಿದ್ಯಾರ್ಥಿಗಳು ಜಾಥದಲ್ಲಿ ಭಾಗವಹಿಸಿದ್ದರು. 9ನೆಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ
ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಕಾರ್ಯಕ್ರಮವನ್ನು ಭಾರತ ಸರಕಾರ ಆಯುಷ್ ಮಂತ್ರಾಲಯವು ನೇರಪ್ರಸಾರವನ್ನು ಹಮ್ಮಿಕೊಂಡಿದ್ದು, ಭಾರತ ಸರಕಾರದ ಸೂಚನೆಯಂತೆ ನೇರ ಪ್ರಸಾರ ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯಲ್ಲಿ ವೀಕ್ಷಿಸಿದ್ದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಸ್ನಾತಕೋತರ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.