ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 26ರಿಂದ ಆರಂಭಗೊಂಡಿದೆ. ಇಂದು ಸಂಜೆ ಜಾತ್ರೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಿತು.ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ

ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ಸ್ಥಾನದವರೆಗೆ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು. ಹಲವಾರು ವಾಹನಗಳಲ್ಲಿ ಹಸಿರು ವಾಣಿ ಮೆರವಣಿಗೆಯಾಗಿ ತಂದು ಸಮರ್ಪಣೆ ಮಾಡಲಾಯಿತು. ಚೆಂಡೆ, ವಾದ್ಯ ಮೇಳಗಳು ಮೆರವಣಿಗೆಗೆ ಸಾಥ್ ನೀಡಿದವು. ಬಳಿಕ ಶ್ರೀರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಳಿಕ ಮೂರುಕಲ್ಲಡ್ಕದಲ್ಲಿ ನಾಗತಂಬಿಲ, ಅನ್ನ ಸಂತರ್ಪಣೆ ನಡೆಯಿತು.
