ಬಾಳಿಲ: ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಯಲ್ಲಿ ಸೋಮವಾರ ನಡೆದ ಕೊಡಮಣಿತ್ತಾಯ, ಧೂಮಾವತಿ, ಶಿರಾಡಿ ದೈವಗಳ ಸಮಾಗಮ ಭಕ್ತಿ ಸಂಭ್ರಮದ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಯಿತು. ಸಾವಿರಾರು ಮಂದಿ ಭಕ್ತರು ದೈವಗಳ ಸಂಗಮಕ್ಕೆ ಸಾಕ್ಷಿಯಾದರು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವದ ಕೊನೆಯ ದಿನವಾದ ಜ. 29ರಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಬಂಡಾರ ಮತ್ತು

ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ
ಭಂಡಾರ ಆಗಮಿಸಿತು. ಬಳಿಕ ಕಲ್ಲಮಾಡದಲ್ಲಿ ಕೊಡಮಣಿತ್ತಾಯ, ಧೂಮಾವತಿ, ಶಿರಾಡಿ ದೈವಗಳ ನರ್ತನ ಸೇವೆ, ಬೂಳ್ಯ ವಿತರಣೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು
ಸೇವಾ ಸಮಿತಿ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ,
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ
ಗೌರವಾಧ್ಯಕ್ಷರೂ ವಿಶ್ವಸ್ಥರೂ ಆದ ಬಾಳಿಲ ಸುಬ್ರಾಯ ಅಡಿಕೆಹಿತ್ತು ವಿಶ್ವಸ್ಥರಾದ ಎನ್. ವಿಶ್ವನಾಥ ರೈ ಕಳಂಜಗುತ್ತು, ವೆಂಕಟ್ರಮಣ ಗೌಡ ತಂಟೆಪ್ಪಾಡಿ, ಶೀನಪ್ಪ ಗೌಡ ತೋಟದಮೂಲೆ, ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಕಿಲಂಗೋಡಿ, ಕೋಶಾಧಿಕಾರಿ ಪ್ರಭಾಕರ ಆಳ್ವ, ಸದಸ್ಯರಾದ

ಕೂಸಪ್ಪ ಗೌಡ ಮುಗುಪ್ಪು, ಗಂಗಾಧರ ತೋಟದಮೂಲೆ, ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಸಪ್ತಗಿರಿ ಪುರಂದರ ಗೌಡ, ಕಾರ್ಯಾಧ್ಯಕ್ಷ ಚಂದ್ರಶೇಖರ ರೈ ಬಜನಿ, ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕಾರ್ಯದರ್ಶಿ ಕುಶಾಲಪ್ಪ ಗೌಡ ಬಿ ಮಣಿಮಜಲು, ಉಪಾಧ್ಯಕ್ಷ ಪುರುಷೋತ್ತಮ ತಂಟೆಪ್ಪಾಡಿ ಜೊತೆ ಕಾರ್ಯದರ್ಶಿ ಕೌಶಿಕ್ ಕೊಡಪಾಲ, ಮಾರ್ಗದರ್ಶಕರಾದ ಮುಂಡುಗಾರು ಸುಬ್ರಹ್ಮಣ್ಯ, ಸುಧಾಕರ ರೈ ಎ.ಎಂ. ಬಾಳಿಲ ರಾಮಚಂದ್ರ ರಾವ್, ರುಕ್ಷಯ್ಯ ಗೌಡ ಕಳಂಜ, ಅಚ್ಚುತ ಗೌಡ ಬಾಳಿಲ ರಾಮ್ ಪ್ರಸಾದ್ ಕಾಂಚೋಡು, ಜಿ.ಪಂ.ಮಾಜಿ ಸದಸ್ಯರಾದ ಪುಷ್ಪಾವತಿ ಬಾಳಿಲ, ಸರಸ್ವತಿ ಕಾಮತ್, ತಾ.ಪಂ.ಮಾಜಿ ಸದಸ್ಯೆ ಜಾಹ್ನವಿ ಕಾಂಚೋಡು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.















