ಸುಳ್ಯ:ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದ್ದು. ಜ.28ರಿಂದ ದೈವಗಳ ನೇಮೋತ್ಸವ ನಡೆಯುತಿದೆ. ಪ್ರಾತಃಕಾಲ ಲಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ದೈವಗಳ ಹಾಗೂ ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಟು ಬೆಳಿಗ್ಗೆ ಅಯ್ಯನಕಟ್ಟೆ ಕಲ್ಲಮಾಡದಲ್ಲಿ
ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ಸಿರಿಮುಡಿ ಏರಿ ನೇಮೋತ್ಸವ ನಡೆಯಿತು. ದೈವದ ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧ ಪ್ರಸಾದ ವಿತರಣೆಯಾಯಿತು. ಬಳಿಕ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ ನಡೆಯಿತು. ಬಳಿಕ ರುದ್ರಚಾಮುಂಡಿ ದೈವದ ನರ್ತನ ಸೇವೆ, ಬೂಳ್ಯ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು, ಮುಖ್ಯ ಅಭ್ಯಾಗತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಿದ್ದಾರೆ. ಬಳಿಕ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ಮಾನಿಷಾದ ನಡೆಯಲಿದೆ. ರಾತ್ರಿ 9:00 ರಿಂದ ಅನ್ನಸಂತರ್ಪಣೆ ನಡೆಯಲಿದೆ. ಅಯ್ಯನಕಟ್ಟೆ ಕಟ್ಟೆ ಜಾತ್ರೆಯ ನೇಮೋತ್ಸವಕ್ಕೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.