ಸುಬ್ರಹ್ಮಣ್ಯ:ಕಳಂಜ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಪರವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಚಂಪಾಷಷ್ಟಿ ಪ್ರಯುಕ್ತ ಸುವಸ್ತು ಕಾಣಿಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ, ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್, ಸದಸ್ಯ ರಾಜೇಶ ಪಟ್ಟೆ, ರುಕ್ಮಯ್ಯ ಗೌಡ ಕಳಂಜ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವನಜಾ ವಿ ಭಟ್, ಶೋಭಾ ಗಿರಿಧರ್, ಪ್ರಸನ್ನ ದರ್ಭೆ, ಶಿಷ್ಟಾಚಾರ ವಿಭಾಗದ ಜಯರಾಮ ರಾವ್ ಮುಂತಾದವರು ಉಪಸ್ಥಿತರಿದ್ದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಸುವಸ್ತು ಕಾಣಿಕೆ ಸ್ವೀಕರಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.