ಬಾಳಿಲ:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಸಂಭ್ರಮದ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯುತಿದೆ.ಜ.28ರಂದು ಬೆಳಿಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ
ರುದ್ರಚಾಮುಂಡಿ ದೈವದ ಕಿರುವಾಲು ಹೊರಟು ಮೂರುಕಲ್ಲಡ್ಕದಲ್ಲಿ ಏಕತ್ರಗೊಂಡು ಕಲ್ಲಮಾಡಕ್ಕೆ ಆಗಮಿಸಿತು. ಬಳಿಕ ಅಯ್ಯನಕಟ್ಟೆ ಕಲ್ಲಮಾಡದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮೋತ್ಸವ ನಡೆಯಿತು. ನೇಮ ನಡೆದು ಬಳಿಕ ಬಟ್ಟಲು ಕಾಣಿಕೆ, ಸಿರಿಮುಡಿ ಗಂಧ ಪ್ರಸಾದ ವಿತರಣೆಯಾಯಿತು.

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ,
ಸೇವಾ ಸಮಿತಿ ಗೌರವಾಧ್ಯಕ್ಷರೂ ವಿಶ್ವಸ್ಥರೂ ಆದ ಬಾಳಿಲ ಸುಬ್ರಾಯ ಅಡಿಕೆಹಿತ್ತು ವಿಶ್ವಸ್ಥರಾದ ಎನ್. ವಿಶ್ವನಾಥ ರೈ ಕಳಂಜಗುತ್ತು, ವೆಂಕಟ್ರಮಣ ಗೌಡ ತಂಟೆಪ್ಪಾಡಿ, ಶೀನಪ್ಪ
ಗೌಡ ತೋಟದಮೂಲೆ, ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಕಿಲಂಗೋಡಿ, ಕೋಶಾಧಿಕಾರಿ ಪ್ರಭಾಕರ ಆಳ್ವ, ಸದಸ್ಯರಾದ ಕೂಸಪ್ಪ ಗೌಡ ಮುಗುಪ್ಪು, ಗಂಗಾಧರ ತೋಟದಮೂಲೆ, ಜಾತ್ರೋತ್ಸವ ಸಮಿತಿ 2024 ಗೌರವಾಧ್ಯಕ್ಷ ಸಪ್ತಗಿರಿ ಪುರಂದರ ಗೌಡ, ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕಾರ್ಯದರ್ಶಿ ಕುಶಾಲಪ್ಪ ಗೌಡ ಬಿ ಮಣಿಮಜಲು, ಉಪಾಧ್ಯಕ್ಷ ಪುರುಷೋತ್ತಮ ತಂಟೆಪ್ಪಾಡಿ ಜೊತೆ ಕಾರ್ಯದರ್ಶಿ ಕೌಶಿಕ್ ಕೊಡಪಾಲ, ಮಾರ್ಗದರ್ಶಕರಾದ ಮುಂಡುಗಾರು ಸುಬ್ರಹ್ಮಣ್ಯ, ಸುಧಾಕರ ರೈ ಎ.ಎಂ. ಬಾಳಿಲ ರಾಮಚಂದ್ರ ರಾವ್, ರುಕ್ಷಯ್ಯ ಗೌಡ ಕಳಂಜ, ಅಚ್ಚುತ ಗೌಡ ಬಾಳಿಲ, ಶುಭಾಶ್ಚಂದ್ರ ಕಳಂಜ, ರಾಮ್ ಪ್ರಸಾದ್ ಕಾಂಚೋಡು, ವಿವಿಧ ಸಮಿತಿಯ ಸಂಚಾಲಕರು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









