ಸುಳ್ಯ: ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ. ಒಂದು ಸಂವಿಧಾನಿಕ ಸಂಸ್ಥೆಯ ಮುಖ್ಯಸ್ಥರಾಗಿ ಸಂವಿಧಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ರಾಜ್ಯಪಾಲರ ನಡೆಯನ್ನು ಈ ಮೂಲಕ ಖಂಡಿಸುತ್ತೆನೆ. ಪ್ರಜಾತಂತ್ರ ವ್ಯವಸ್ಧೆಯಂತೆ ಕರ್ನಾಟಕದ ಜನತೆ ಆಯ್ಕೆ ಮಾಡಿದ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿಗಳ ಮೇಲೆ ರಾಜಕೀಯ ಪ್ರೇರಿತ ಅಪಾದನೆಗೆ ತನಿಖೆಗೆ ಅನುಮತಿ ನೀಡುವ ಮೂಲಕ ರಾಜಭವನದ ಘನತೆಗೆ ಅಗೌರ ಮಾಡಿದಂಥಾಗಿದೆ ಎಂದು ಅವರು ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.