ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು
ಈಗಾಗಲೇ ಹೇಳಿದ್ದೇನೆ. ಆದ್ದರಿಂದ ಮತ್ತೆ ನಾನು ಸದನದ ಒಳಗೆ ಬರುವ ಪ್ರಶ್ನೆ ಇರುವುದಿಲ್ಲ.ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ ಎಂದು ಭಾವುಕರಾಗಿ ಹೇಳಿದರು. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಮತ್ತೆ ವಿಪಕ್ಷ ಸ್ಥಾನದಲ್ಲೇ ಇರಬೇಕಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಸದೃಢವಾಗಿದೆ. ಮೋದಿಯವರ ಮಾರ್ಗದರ್ಶನದಡಿ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಇದನ್ನು ಒಪ್ಪಿಕೊಳ್ಳಲು ಯಾರೂ ಸಂಕೋಚ ಪಡುವ ಅಗತ್ಯ ಇಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಇದೇ ವೇಳೆ ಯಡಿಯೂರಪ್ಪ ಹೇಳಿದರು.