ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಸುಳ್ಯ, ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪರಾಷ್ಟ್ರಪತಿ ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಮಾರಂಭವನ್ನು
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಡಾ.ಬಾಬು ಜಗಜೀವನ ರಾಂ ಅವರ ಕುರಿತು ಉಪನ್ಯಾಸ ನೀಡಿದರು. ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ,ಉಪಾಧ್ಯಕ್ಷ ಬುದ್ಧ ನಾಯ್ಕ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯರಾದ ಕಿಶೋರಿ ಶೇಟ್, ಎಂ.ವೆಂಕಪ್ಪ ಗೌಡ, ಶೀಲಾ ಅರುಣ ಕುರುಂಜಿ, ಸುಧಾಕರ, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಶಿಲ್ಪಾ ಸುದೇವ್, ತಹಶೀಲ್ದಾರ್ ಎಂ.ಮಂಜುಳ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮಾದೇವಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕೃಷ್ಣ ಸ್ವಾಗತಿಸಿದರು.