ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ಆಡಳಿತದ ವತಿಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಎಂ.ಮಂಜುಳ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ನಗರ
ಯೋಜನಾ ಪ್ರಾಧಿಕಾರದ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಉದ್ಘಾಟಿಸಿದರು.ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಮಾತನಾಡಿದರು
ಶಿಕ್ಷಣ ಇಲಾಖೆಯ ಮಮತಾ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ. ಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮೇಲ್ವಿಚಾರಕ ವಿಶ್ವನಾಥ್ ವಂದಿಸಿದರು.









