ಸುಳ್ಯ: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕದ ವತಿಯಿಂದ ಕೆ.ವಿ.ಜಿ ಪುರಭವನದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ, ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕೂಟ ಹಾಗೂ ವಿವಿಧ
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಶಾಸಕರು ಬಹುಮಾನ ವಿತರಿಸಿದರು. ಆಟಿ ತಿಂಗಳಿನ ಮಹತ್ವ ಹಾಗೂ ಹಿಂದಿನ ಕಾಲದಲ್ಲಿ ಹಿರಿಯರು ತುಂಬಾ ಕಷ್ಟದಲ್ಲಿ ಜೀವನವನ್ನು ನಡೆಸುತ್ತಿದ್ದರು. ನಮ್ಮ ತುಳುನಾಡಿನ ಆಚರಣೆಯನ್ನು ಯುವ ಸಮೂಹ ಬೆಳೆಸಬೇಕು ಎಂದು ಹೇಳಿದರು.
ಮಹೇಶ್ ಕುಮಾರ್ ಮೇನಾಲ ಉಪಸ್ಥಿತರಿದ್ದರು.
ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂಪುರ,ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಗೌರವ ಸಲಹೆಗಾರ ವಿಜಯ ಆಲಡ್ಕ,
ಸಂಘದ ಸುಳ್ಯ ಘಟಕದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು, ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸಂಘದ ಮಹಿಳಾ ಘಟಕದ ಸುಳ್ಯ ಘಟಕದ ಕಾರ್ಯದರ್ಶಿ ದಿಲೀಪ್ ಕೆ.ಎಲ್, ಕೋಶಾಧಿಕಾರಿ ಮಲ್ಲೇಶ್ ಕುಡೆಕಲ್ಲು, ನಗರ ಅಧ್ಯಕ್ಷ ಶ್ರವಣ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.