ಸುಳ್ಯ: ಸುಳ್ಯ ಸಾರ್ವಜನಿಕ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.ಸರ್ಕಾರಿ ಆಸ್ಪತ್ರೆಯಲ್ಲಿ
ಡಯಾಲಿಸಿಸ್ ಸೆಂಟರ್, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕ, ಮಕ್ಕಳ ಚಿಕಿತ್ಸಾ ವಿಭಾಗ, ಮಹಿಳಾ ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ವೀಕ್ಷಿಸಿ ಚಿಕಿತ್ಸೆ ಪಡೆಯುವವರ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಟಾಧಿಕಾರಿ ಡಾ. ಕೆ ವಿ ಕರುಣಾಕರ, ನ.ಪಂ.ಸದಸ್ತೆ ಕಿಶೋರಿ ಶೇಟ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.