ಸುಳ್ಯ: ಸುಳ್ಯ ಶಾಸಕಿಯಾಗಿ ಭಾಗೀರಥಿ ಮುರುಳ್ಯ ಇಂದು ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಅಧಿವೇಶನದಲ್ಲಿ
ನಡೆಯುತಿದೆ. ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕುಲದೇವರಾದ ಸತ್ಯಸಾರಮಣಿ, ಸತ್ಯಪದನಾಜಿ, ಅಮ್ಮನವರು ಹಾಗೂ ಮಾತದಾರ ಭಾಂಧವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಅಧಿವೇಶನದಲ್ಲಿ ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಕೊನೆ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಆರ್.ವಿ ದೇಶಪಾಂಡೆಯವರ ನೇತೃತ್ವದಲ್ಲಿ ಪ್ರಮಾಣ ವಚನ ನಡೆಯಿತು.